ಬೆಂಗಳೂರು: ರಾಜ್ಯಸಭಾ ಚುನಾವಣಾ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವ ಸಲುವಾಗಿ ಬುಧವಾರ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ಕರೆದಿದ್ದು, ಎಲ್ಲ ಶಾಸಕರು ಖುದ್ದು ಉಪಸ್ಥಿತರಿರುವಂತೆ ಸೂಚನೆ ನೀಡಿದ್ದಾರೆ. ಸಂಜೆ ಏಳು ಗಂಟೆಗೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಈ ಸಭೆ ನಡೆಯಲಿದೆ. ಹಲವು ತಿಂಗಳು ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದೆ.