ಮಧ್ಯರಾತ್ರಿಯಲ್ಲಿ ಅಪರಿಚಿತ ವ್ಯಕ್ತಿಗಳು ದೇವಾಲಯದ ಆವರಣಕ್ಕೆ ನುಗ್ಗಿ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. 6 ರಿಂದ 8 ಮಂದಿ ದ್ವಿಚಕ್ರ ವಾಹನದಲ್ಲಿ ದೇವಸ್ಥಾನಕ್ಕೆ ಬಂದು ದಾಳಿ ಮಾಡಿದರು. ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜೀವ್ ತಿಳಿಸಿದ್ದಾರೆ.
ಕೋರಂಗಿ ಎಸ್ಎಚ್ಒ ಫಾರೂಕ್ ಸಂಜರಾಣಿ ಎಂಬವವರು, 5 ರಿಂದ 6 ಅಪರಿಚಿತ ಶಂಕಿತರು ದೇವಾಲಯಕ್ಕೆ ನುಗ್ಗಿ ಅದನ್ನು ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ. ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ ಶಂಕಿತರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು.
ಅಕ್ಟೋಬರ್ನಲ್ಲಿ ಕೊಟ್ರಿಯ ಸಿಂಧೂ ನದಿಯ ದಡದಲ್ಲಿರುವ ಐತಿಹಾಸಿಕ ದೇವಾಲಯವನ್ನು ಅಪರಿಚಿತರು ಅಪವಿತ್ರ ಗೊಳಿಸಿದ್ದರು. ದೇವಾಲಯ ಧ್ವಂಸ ಗೊಂಡಿರುವ ಘಟನೆಯ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕೂಡಲೇ ಪೊಲೀಸರು ಸ್ಥಳಕ್ಕೆ ಬಂದರು.
ಆಗಸ್ಟ್ನಲ್ಲಿ ಹತ್ತಾರು ಮಂದಿ ಜನರು ಭೋಂಗ್ ಪಟ್ಟಣದಲ್ಲಿ ಸ್ಥಳೀಯ ಗಣೇಶ ದೇವಾಲಯವನ್ನು ಧ್ವಂಸಗೊಳಿಸಿದ್ದರು. 2021 ಡಿಸೆಂಬರ್ನಲ್ಲಿ ಕರಾಚಿಯ ನಾರಾಯಣಪುರದ ನಾರಾಯಣ ಮಂದಿರವನ್ನು ಧ್ವಂಸಗೊಳಿಸಲಾಗಿತ್ತು. ಘಟನೆಯಲ್ಲಿ ದೇವತೆಗಳ ಪ್ರತಿಮೆಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಮಹಮ್ಮದ್ ವಾಲೀದ್ ಶಬ್ಬೀರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.
ಮತ್ತೊಂದು ಪ್ರಕರಣದಲ್ಲಿ ಖೈಬರ್ ಪಖ್ತುನ್ವಾ ಪ್ರಾಂತ್ಯ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ಸುಮಾರು 55 ಮಂದಿಯನ್ನು ಬಂಧಿಸಲಾಗಿತ್ತು.