ದೇಶದಲ್ಲಿ 8 ಸಾವಿರಕ್ಕೂ ಹೆಚ್ಚು ದೈನಂದಿನ ಕರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇ.2.41ರಷ್ಟು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.
ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,13,435ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,757ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,370ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 4,216 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,48,308ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 3,35,050 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,76,42,992 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.