ಮೋದಿ ಅವರ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶ. ನಾವೆಲ್ಲಾ ವೇದಿಕೆಯ ಕೆಳ ಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳೂ ಇಲ್ಲ ಎಂದರು.
ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲಾ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಮೋದಿ ಅವರೊಂದಿಗೆ ಯೋಗ ಮಾಡಲು ಅವಕಾಶವಿರಲಿದೆ ಎಂದರು.
ಮೋದಿ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್ಗಳನ್ನು ಯಾರೂ ಹಾಕಬಾರದು. ಸರ್ಕಾರವೇ ಮೋದಿ ಅವರ ಸ್ವಾಗತದ ಬ್ಯಾನರ್ ಗಳನ್ನು ಹಾಕುತ್ತದೆ. ನಮ್ಮ ಪಕ್ಷದವರೇ ಇರಲಿ, ಸಂಘ-ಸಂಸ್ಥೆಗಳವರೇ ಇರಲಿ ಯಾವುದೇ ಫ್ಲೆಕ್ಸ್ಗಳನ್ನ ಹಾಕಿ ನಗರದ ಸೌಂದರ್ಯ ಹಾಳು ಮಾಡಬಾರದು ಎಂದು ಕೋರಿದರು.