Sunday, 27th October 2024

ದೇಶದ ಆರ್ಥಿಕ ಸ್ಥಿತಿ ಇನ್ನೂ ಬಿಗಡಾಯಿಸಲಿದೆ: ಎಚ್‌.ಡಿ. ಕುಮಾರಸ್ವಾಮಿ

ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
 ಕರೋನಾದಿಂದಾಗಿ ದೇಶದ ಆರ್ಥಿಕತೆ ತೀವ್ರವಾಗಿ ಕುಸಿದಿದ್ದು ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ, ಹಸಿವು-ನಿರುದ್ಯೋಗ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರಕಾರಗಳು ಈಗಲೇ ಈ ಕುರಿತು ಆರ್ಗೋಪಾಯಗಳನ್ನು ಹುಡುಕಬೇಕು. ಜನರ ಕೈನಲ್ಲಿ ಹಣ ಇರುವಂತೆ ನೋಡಿಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
 ಕರೋನಾ ಹರಡುವುದನ್ನು ತಡೆಯುವ ಸಲುವಾಗಿ ಕಳೆದ 5 ವಾರಗಳಿಂದ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಪರಿಣಾಮ ದೇಶದ ಆರ್ಥಿಕತೆ ಮತ್ತು ಜಿಡಿಪಿ ಕುಸಿದಿದ್ದು ಜನ ಬದುಕನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಡುವ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಿರುವ ಕುಮಾರಸ್ವಾಮಿ, ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ.
ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ.
ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ. ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ” ಎಂದು ಸಲಹೆ ನೀಡಿದ್ದಾರೆ.
ಅಲ್ಲದೆ, ರೈತರ ಮತ್ತು ಕಾರ್ಮಿಕರ ಬಗ್ಗೆಯೂ ಸರ್ಕಾರದ ಗಮನ ಸೆಳೆದಿರುವ ಅವರು, “ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ” ಎಂದು ಒತ್ತಾಯಿಸಿದ್ದಾರೆ.