ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಗುರುವಾರವೂ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದುವರಿಸಿದೆ. ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಮತ್ತು ಭಯೋತ್ಪಾದಕರಿಗೆ ಹಣ ಒದಗಿಸುವ ಕೆಲಸದಲ್ಲಿ ತೊಡಗಿರುವ ಮಾಹಿತಿ, ಸಂದೇಹಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿ ಶೋಧ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆ ದಾಳಿ ನಡೆಸಿದೆ. ಕಣವೆಯಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಹೋಗಿ ವ್ಯವಹಾರ ನಡೆಸಿ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಸ್ಥಳಗಳಿಗೆ ಈ ದಾಳಿಗಳು ಸಂಬಂಧಿಸಿವೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಒಳಗೊಂಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಪಡೆಗಳ ಸಹಾಯದಿಂದ ಶಂಕಿತರ ವಸತಿ ಆವರಣಗಳನ್ನು ಶೋಧಿಸಲಾಗುತ್ತಿದೆ.