ನವದೆಹಲಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲೆಸ್ ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಗೆ ಕೈ ಜೋಡಿಸಿದರು.
ಮಂಗಳವಾರ ಬೆಳಿಗ್ಗೆಯೇ ಯೋಗ ಮಾಡಿದ್ದು, ಈ ಬಗ್ಗೆ ಟ್ವಿಟ್ಟರ್ನಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ. ಇಂದು ಯೋಗದಿಂದ ದಿನವನ್ನು ಪ್ರಾರಂಭಿಸಿದ್ದೇನೆ. ಈ ಮೂಲಕ ಉಭಯ ರಾಷ್ಟ್ರಗಳ ಸ್ನೇಹಪೂರ್ವ ಮಾತು ಕತೆಗೆ ಸಜ್ಜಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.