ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಕೇಂದ್ರವು ಸಿಆರ್‌ಪಿಎಫ್ ಕಮಾಂಡೋಗಳ Z+ ಭದ್ರತೆ ನೀಡಿದೆ.
ಸಶಸ್ತ್ರ ಪಡೆ ಬುಧವಾರ ಬೆಳಿಗ್ಗೆಯಿಂದ ಮುರ್ಮು ಅವರ ಭದ್ರತೆಯನ್ನು ವಹಿಸಿ ಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಮಂಗಳವಾರ ಸಂಜೆ ಗೃಹ ಸಚಿವಾಲಯದಿಂದ ಬಂದ ಆದೇಶದ ನಂತರ ಸಿಆರ್‌ಪಿಎಫ್ ಮುರ್ಮು ಅವರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಗೌಪ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿಯು ಜಾರ್ಖಂಡ್‌ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರನ್ನು ಆಡಳಿತಾ ರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಮಂಗಳ ವಾರ ಹೆಸರಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಇವರು ಚುನಾಯಿತರಾದರೆ ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆ ಮತ್ತು ಭಾರತದ 2ನೇ ಮಹಿಳಾ ರಾಷ್ಟ್ರಪತಿಯಾಗಲಿದ್ದಾರೆ.