ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸಂಜೆಯೊಳಗೆ ರಾಜೀನಾಮೆ ನೀಡಬಹುದು. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ಸುಳಿವು ನೀಡಿ ದ್ದಾರೆ. ಹೆಚ್ಚೆಂದರೆ ಏನಾಗುತ್ತದೆ, ರಾಜ್ಯದಲ್ಲಿ ನಮ್ಮ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ನಾವು ಅಧಿಕಾರಕ್ಕೆ ಮರಳ ಬಹುದು, ಆದರೆ ಪಕ್ಷದ ಇಮೇಜ್ ಮೇಲಿರುತ್ತದೆ ಎಂದು ಹೇಳಿದ್ದಾರೆ.