ನವದೆಹಲಿ: ದೇಶದಾದ್ಯಂತ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ.
ಗುರುವಾರ 13,313 ಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದವು. ಈ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕರೋನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ ಹೆಚ್ಚಳ ಕಂಡುಬಂದಿದೆ. ದೇಶದಲ್ಲಿ ಈವರೆಗೆ 4,33,62,294 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 5,24,954 ಮಂದಿ ಸೋಂಕಿ ತರು ಮೃತಪಟ್ಟಿದ್ದಾರೆ.