Friday, 22nd November 2024

ಎನ್’ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್‌ಪಿ ಬೆಂಬಲ

ನವದೆಹಲಿ: ಬಹುಜನ್ ಸಮಾಜ್ ಪಕ್ಷದ ವರಿಷ್ಠೆ ಮಾಯಾವತಿ, ರಾಷ್ಟ್ರಪತಿ ಚುನಾವಣೆ ಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಿರ್ಧರಿಸಿ ದ್ದೇವೆ. ನಾವು ಈ ನಿರ್ಧಾರವನ್ನು ಬಿಜೆಪಿಯನ್ನು ಅಥವಾ ಎನ್ ಡಿಎಯನ್ನು ಬೆಂಬಲಿಸಲು ಅಥವಾ ವಿಪಕ್ಷಗಳ ವಿರುದ್ಧವಲ್ಲ. ಆದರೆ ನಮ್ಮ ಪಕ್ಷ ಮತ್ತು ಅದರ ಹೋರಾಟವನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ ವಿಪಕ್ಷ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು.

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ಕೊಡು ವಂತೆ ಸಿನ್ಹಾ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೂ ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.