Sunday, 27th October 2024

ತುಮಕೂರು ಅಭಿವೃದ್ಧಿ ಸ್ಮಾಟ್೯ಸಿಟಿ ಯೋಜನೆಗೆ ಸಲ್ಲಬೇಕು: ಶಾಸಕ ಶ್ಲಾಘನೆ

ಪ್ರೆಸ್ ಕ್ಲಬ್ ತುಮಕೂರು ಸಹಯೋಗ
ತುಮಕೂರು: ತುಮಕೂರು ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್ಸಿಟಿ ಯೋಜನೆಗೆ ಸಲ್ಲಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು.
ನಗರದ ಆಲದಮರ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರೆಸ್ ಕ್ಲಬ್ ತುಮಕೂರು ಸಹಯೋಗ ದೊಂದಿಗೆ ನಡೆದ ಸ್ಮಾರ್ಟ್ಸಿಟಿ ಯೋಜನೆಯ 7ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ತುಮಕೂರು ನಗರ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾಗದಿದ್ದರೆ ನಗರದ ಸ್ಥಿತಿ ಏನಾಗು ತ್ತಿತ್ತು ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ 2ನೇ ಹಂತದಲ್ಲಿ ತುಮ ಕೂರು ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾದ ನಂತರ ಸುಮಾರು 900 ಕೋಟಿ ರು. ವೆಚ್ಚದಲ್ಲಿ 128 ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದರು.
ದೇಶದಲ್ಲಿ 2015ರ ಜೂನ್ 25 ರಂದು ಸ್ಮಾರ್ಟ್ಸಿಟಿ ಯೋಜನೆ ಘೋಷಣೆಯಾಗಿ ಇಂದಿಗೆ 7 ವರ್ಷ ಸಂದಿದೆ. ಈ ಯೋಜನೆಗೆ ತುಮಕೂರು ಆಯ್ಕೆಯಾಗಿ 5 ವರ್ಷವಾಗಿದ್ದು, ನಗರದಲ್ಲಿ ಸುಮಾರು 151 ಅಭಿವೃದ್ಧಿ ಯೋಜನೆ ಗಳು ಚಾಲನೆಯಲ್ಲಿವೆ. ಹೊಸದಾಗಿ 27 ಯೋಜನೆಗಳು ಟೆಂಡರ್ ಹಂತದಲ್ಲಿದ್ದು, ಒಟ್ಟು 178 ಯೋಜನೆಗಳು ಸುಮಾರು 900 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿವೆ ಎಂದರು.
ಪ್ರೆಸ್ ಕ್ಲಬ್ ಕಾರ್ಯ ಶ್ಲಾಘನೀಯ: ಜೂನಿಯರ್ ಕಾಲೇಜು ಮೈದಾನದಲ್ಲಿರುವ ಆಲದಮರ ಪಾರ್ಕ್ ಅನ್ನು 70-80 ಲಕ್ಷ ರು. ವೆಚ್ಚದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದೆ. ಆದರೆ ಅಭಿವೃದ್ಧಿಪಡಿಸಿದ ನಂತರ ಈ ಪಾರ್ಕ್ ಕುಡುಕರ ತಾಣವಾಗಿ ಮಾರ್ಪಟ್ಟಿತ್ತು. ಅಲ್ಲದೆ ಇಲ್ಲಿನ ಪರಿಕರಗಳನ್ನು ಒಡೆದು ಹಾಕುತ್ತಿದ್ದರು. ಪ್ರೆಸ್‌ಕ್ಲಬ್ ದತ್ತು ಪಡೆದ ಮೇಲೆ ಸಮಾಜ ಮುಖಿ, ಪರಿಸರ ಕಾಳಜಿ ಕಾರ್ಯಕ್ರಮಗಳು ನಡೆಯುತ್ತಿವೆ. ಇದೊಂದು ಉತ್ತಮ ಬೆಳವಣಿಗೆ ಎಂದರು.
ದೇಶದಲ್ಲೇ ತುಮಕೂರು ಸ್ಮಾರ್ಟ್ಸಿಟಿ 7ನೇ ಸ್ಥಾನದಲ್ಲಿದ್ದು, ಕರ್ನಾಟಕ ರಾಜ್ಯದಲ್ಲಿ ನಂ. 1 ಸ್ಮಾರ್ಟ್ಸಿಟಿ ಆಗಿ ಹೊರ ಹೊಮ್ಮಿದೆ. ಮುಂದೆಯೂ ಈ ಸ್ಥಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸ್ಮಾರ್ಟ್ಸಿಟಿ ಅಧಿಕಾರಿಗಳು ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ನಗರದ ಅಲ್ಲಲ್ಲಿ ಬೀದಿಬದಿ ವ್ಯಾಪಾರಿಗಳಿಗಾಗಿ ವೆಂಡರ್ ಜೋನ್, ಕಳ್ಳತನ ಸೇರಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಕಮಾಂಡ್ ಸೆಂಟರ್‌ಗಳನ್ನು ಸ್ಥಾಪಿಸಲಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ ಎಂದ ಅವರು ನಗರದ ಸರ್ವತೋಮುಖ ಅಭಿವೃದ್ಧಿಗೆ ನಾಗರಿಕರ ಸಹಕಾರ ಅತ್ಯಗತ್ಯ ಎಂದರು.
ಸಂಸದ ಜಿ.ಎಸ್ ಬಸವರಾಜು ಮಾತನಾಡಿ ಸಿಟಿ ಸ್ಮಾರ್ಟ್ ಆಗಬೇಕಾದರೇ ನಾಗರಿಕರು ಸಹ ಸ್ಮಾರ್ಟ್ ಆಗಬೇಕು. ನಗರ ಸ್ವಚ್ಛವಾ ಗಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ. ಅತ್ಯಧಿಕ ಆಮ್ಲಜನಕವನ್ನು ನೀಡುವ ಅರಳಿ, ಬೇವು ಸೇರಿದಂತೆ ಅನೇಕ ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು ಎಂದರು.
ನಗರಗಳ0ತೆ ಹಳ್ಳಿಗಳು ಸ್ಮಾರ್ಟ್ ಆಗಬೇಕೆಂಬುದು ಕೇಂದ್ರ ಸರ್ಕಾರದ ಅಭಿಲಾಷೆಯಾಗಿದ್ದು ಅದಕ್ಕಾಗಿ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತಂದು ಹಳ್ಳಿಗಳ ಸಮಗ್ರ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಬಿ.ಟಿ. ರಂಗಸ್ವಾಮಿ ಮಾತನಾಡಿ, 2017ರ ಪ್ರಾರಂಭವಾಗಿ ಸಾಕಷ್ಟು ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗಿದೆ. ಅಂದಿನಿAದ ಎಲ್ಲ ಬಡಾವಣೆಯ ರಸ್ತೆಗಳು, ಚರಂಡಿಗಳು, ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಎಸ್.ಎಸ್ ಪುರಂನ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಗಿಡಗಳನ್ನು ನೆಡಲಾಯಿತು. ಉಪ್ಪಾರಹಳ್ಳಿ ಮೆಲ್ಸೇತುವೆಯ ಸೌಂದರ್ಯಕರಣಕ್ಕಾಗಿ ಬಣ್ಣ ಬಳಿಯುವ ಕೆಲಸಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮೇಯರ್ ಬಿ.ಜಿ. ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಕುಮಾರ್, ಮಂಜುಳ ಆದರ್ಶ, ಸಿ.ಎನ್. ರಮೇಶ್, , ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ. ರಂಗಸ್ವಾಮಿ, ಮುಖ್ಯ ಇಂಜಿನಿಯರ್ ಫಣಿರಾಜು, ಚನ್ನಬಸವರಾಜು, ಪ್ರೆಸ್ ಕ್ಲಬ್ ಉಪಾಧ್ಯಕ್ಷರಾದ ಶ್ರೀನಿವಾಸರೆಡ್ಡಿ, ಮಾರುತಿ ಗಂಗಹನುಮಯ್ಯ, ಪ್ರಧಾನ ಕಾರ್ಯದರ್ಶಿ ಯೋಗೇಶ್ ಹಾಗೂ ಪ್ರೆಸ್‌ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.