ಕಳೆದ 24 ಗಂಟೆಗಳ ಅವಧಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,07,189ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 14,413 ಮಂದಿ ಈವರೆಗೆ 4,28,36,906 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ ನಿಂದ 4 ಕೋಟಿಯ 28 ಲಕ್ಷದ 36 ಸಾವಿರದ 906 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,02,150 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 86.28 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 197.74 ಕೋಟಿ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.