Friday, 22nd November 2024

ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 40 ಸಾವಿರ ದಾಟಿದೆ

ಮುಂಬೈ:

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಾಮಾರಿ ಕರೋನಾ ನಿಗ್ರಹಕ್ಕಾಗಿ ಶತ ಪ್ರಯತ್ನಗಳನ್ನು ಮುಂದುವರಿಸಿದ್ದರೂ, ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಒಂದೇ ದಿನ ದೇಶದ ಹಲವು ಕಡೆ 2,293 ಮಂದಿಯಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗಿರುವುದು ಪರಿಸ್ಥಿತಿಯನ್ನು ಅಯೋಮಯವಾಗಿಸಿದೆ.

ಭಾರತದಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆ 40 ಸಾವಿರ ದಾಟಿದೆ. ಕರೊನಾ ನಿಗ್ರಹಿಸಲು ಕೇಂದ್ರ ಸರಕಾರ ಜಾರಿಗೊಳಿಸಿರುವ ಎರಡನೇ ಹಂತದ ಲಾಕ್ ಡೌನ್ ಇಂದು ಅಂತ್ಯಗೊಳ್ಳಲಿದೆ. 40 ದಿನಗಳ ಭಾರತ ದಿಗ್ಬಂಧನದ ನಂತರ ಮೇ.4ರಿಂದ 17ರ ವರೆಗೆ 14 ದಿನಗಳ ಲಾಕ್ ಡೌನ್ 3 ಜಾರಿಗೆ ಬರಲಿದೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಕರೋನಾ  ನಿಗ್ರಹಕ್ಕಾಗಿ ಪ್ರಯತ್ನಗಳನ್ನು ಮುಂದುವರಿಸಿದ್ದರೂ, ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ಸರಾಸರಿ ಶೇ.25ರಷ್ಟು (10,632 ಮಂದಿ ಗುಣಮುಖ) ಸುಧಾರಣೆ ಕಂಡುಬಂದಿದ್ದರೂ, ಮತ್ತೊೊಂದೆಡೆ ದಿನನಿತ್ಯ ಮರಣ ಮತ್ತು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಲೇ ಇರುವುದು ದೇಶದ ಜನರನ್ನು ಚಿಂತಾಕ್ರಾಾಂತವನ್ನಾಗಿ ಮಾಡಿದೆ.

24 ತಾಸುಗಳ ಅವಧಿಯಲ್ಲಿ ದೇಶದ ವಿವಿಧೆಡೆ 2,067 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, ಒಂದು ದಿನಕ್ಕೆ 93 ಮಂದಿಯನ್ನು ಮಹಾಮಾರಿ ನುಂಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಭಾರತದಲ್ಲಿ ಮೃತರ ಸಂಖ್ಯೆ 1,301ಕ್ಕೇರಿದೆ. ಮತ್ತೊೊಂದಡೆ ಸೋಂಕು ಪೀಡಿತರ ಸಂಖ್ಯೆ 39,980ಕ್ಕೇರಿದೆ.

ಕೆಲವು ರಾಜ್ಯಗಳಲ್ಲಿ ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು ಮಾಹಿತಿ ಪ್ರಕಾರ ಪಾಸಿಟಿವ್ ಪ್ರಕರಣಗಳ ಸಂಖ್ಯೆ 40 ಸಾವಿರ ದಾಟಿದೆ. ಕರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, 28,046ರಷ್ಟಿದೆ. ಈ ಮಧ್ಯೆ, ಈವರೆಗೆ 10,632 ಮಂದಿ ಗುಣಮುಖರಾಗಿ ಮನೆಗಳಿಗೆ ಮರಳಿದ್ದಾರೆ.