ಆನೇಕಲ್:
ಆನೆಕಲ್‌ನಲ್ಲಿ ಮಕ್ಕಳು ಮತ್ತು ಮಹಿಳೆಯರಿಗೆ ಬಳಕೆಯಾಗಬೇಕಿದ್ದ ಆಹಾರ ಸಾಮಾಗ್ರಿಗಳನ್ನು ಬಿಜೆಪಿ ನಾಯಕರು ಅಕ್ರಮವಾಗಿ ಬೇರೆಡೆಗೆ ಕೊಂಡೊಯ್ದು ತಮ್ಮ ಪಕ್ಷದ ಚಿಹ್ನೆ ಮುದ್ರಿಸಿ ತಮಗೆ ಬೇಕಾದವರಿಗೆ ವಿತರಣೆ ಮಾಡುತ್ತಿದ್ದಾರೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿ ಮುಂದೆ ಪ್ರತಿಭಟಿಸಿದರು.
ಬಡಜನರಿಗೆ ಬಳಕೆಯಾಗಬೇಕಿದ್ದ ಸರಕಾರಿ ಯೋಜನೆಯನ್ನು ತಮ್ಮ ಪಕ್ಷದ ಪ್ರಚಾರಕ್ಕಾಗಿ ಬಳಸುತ್ತಿರುವುದು ನಾಚಿಕೆಗೇಡು. ಬಿಜೆಪಿ ನಾಯಕರ ಈ ಲಜ್ಜೆಗೇಡಿ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರೇ ನೇರ ಹೊಣೆ ಎಂದು ಹೇಳಿದರು .
ಹಾಗೂ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.