Sunday, 27th October 2024

ಜು.8ರಿಂದ ಸಿದ್ಧಾಂತ ಶಿಖಾಮಣಿ ಪ್ರವಚನ

ಗದಗ: ಜುಲೈ 8ರಿಂದ 13ರವರೆಗೆ ಪ್ರತಿದಿನ ಸಂಜೆ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಂಘವು ಆಷಾಢ ಮಾಸದ ನಿಮಿತ್ತ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಕೆ. ಗುರುಮಠ ಹೇಳಿದರು.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದಂಗಳವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಹುಬ್ಬಳ್ಳಿಯ ಕಾಶೀ ಖಾಸಾ ಶಾಖಾಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರವಚನ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.
ಜು.8ರಂದು ನಡೆಯುವ ಉದ್ಘಾಟನಾ ಸಮಾರಂಭದ ನೇತೃತ್ವವನ್ನು ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ವಹಿಸು ವರು. ರೋಣ ಶಾಸಕ ಕಳಕಪ್ಪ ಬಂಡಿ  ಉದ್ಘಾಟಿಸು ವರು ಎಂದರು.
ಜುಲೈ 13 ರಂದು ನಡೆಯುವ ಗುರುಪೂರ್ಣಿಮಾ ಹಾಗೂ ಮಂಗಲೋತ್ಸವ ಕಾರ್ಯಕ್ರಮ ನಡೆಯಲಿದೆ. ವಿಮಲ ರೇಣುಕಾ ವಿರಕ್ತಮನಿ ಶಿವಾಚಾರ್ಯ ಸ್ವಾಮೀಜಿಗಳು ನೇತೃತ್ವ ವಹಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಶಾಸಕ ಎಚ್ ಕೆ ಪಾಟೀಲ್ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರಿಗೆ ಗುರುರಕ್ಷೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಕೃಪಾಪೋಷಿತ ಧರ್ಮ ಪ್ರಕಾಶ ಪ್ರಶಸ್ತಿಯನ್ನು ಗದಿಗೆಪ್ಪ ಮಾಮಲೆಪಟ್ಟಣಶೆಟ್ಟರ್ ಹಾಗೂ ದಿವ್ಯಾಂಗ ಪ್ರತಿಭಾ ಪುರಸ್ಕಾರವನ್ನು ಲಕ್ಷ್ಮಣ ತಳವಾರ್ ಅವರಿಗೆ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸೇವಾ ಸಮಿತಿಯ ಎಸ್.ಎಸ್. ಮೇಟಿ, ಸುನೀಲ ಅಬ್ಬಿಗೇರಿ, ವಿಜಯಕುಮಾರ ಹಿರೇಮಠ, ಮಂಜುನಾಥ ಬೇಲೇರಿ, ಸಂಗಮ್ಮ ಹಿರೇಮಠ, ಎಂ.ಎಂ. ಹಿರೇಮಠ ಇದ್ದರು.