ವಾರಣಾಸಿಯ ಎಲ್‌ಟಿ ಕಾಲೇಜಿನಲ್ಲಿ ಪ್ರಧಾನ ಮಂತ್ರಿಗಳು ‘ಅಕ್ಷಯ ಪಾತ್ರಾ ಮಿಡ್ ಡೇ ಮೀಲ್ ಕಿಚ್ಚನ್’ ಅನ್ನು ಉದ್ಘಾಟಿಸ ಲಿದ್ದಾರೆ. ಒಂದು ಲಕ್ಷ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡುವ ಸಾಮರ್ಥ್ಯ ಹೊಂದಿದೆ.
ಪ್ರಧಾನಿಯವರು ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ ರುದ್ರಾಕ್ಷಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಕುರಿತು ‘ಅಖಿಲ ಭಾರತೀಯ ಶಿಕ್ಷಾ ಸಮಗಮ’ ಅನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವಾಲಯವು ಜು.7 ರಿಂದ 9 ರವರೆಗೆ ಶಿಕ್ಷಾ ಸಮಾಗಮ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಗವರ್ನರ್ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 4 ಗಂಟೆ ಸುಮಾರಿಗೆ ಸಿಗ್ರಾದ ಡಾ.ಸಂಪೂರ್ಣಾನಂದ ಸ್ಪೋರ್ಟ್ಸ್ ಸ್ಟೇಡಿಯಂಗೆ ಪ್ರಧಾನಿ ಆಗಮಿಸಲಿದ್ದು, ಅಲ್ಲಿ 1,800 ಕೋಟಿ ರೂ. ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.