ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಸ್ಟಂಪ್ ಭಾಷಣ ಮಾಡುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ದಾಳಿ ನಡೆಸಿದ್ದು, 67 ವರ್ಷದ ಜಪಾನ್ ಮಾಜಿ ಪ್ರಧಾನಮಂತ್ರಿ ಶಿಂಜೋ ಅಬೆ ದಿಢೀರನೇ ಕುಸಿದುಬಿದ್ದರು.
ಜಪಾನ್‌ನ ಪ್ರಧಾನಮಂತ್ರಿ ಆಗಿ ಶಿಂಜೋ ಅಬೆ ಸುದೀರ್ಘ ಅವಧಿಯವರೆಗೂ ಸೇವೆ ಸಲ್ಲಿಸಿದ್ದಾರೆ. ಅವರು 2006ರಲ್ಲಿ ಒಂದು ವರ್ಷ ಮತ್ತು 2012 ರಿಂದ 2020ರವರೆಗೂ ಅಧಿಕಾರದಲ್ಲಿ ಇದ್ದರು.
1982ರಲ್ಲಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೇರಿದ ಶಿಂಜೋ ಅಬೆ, ವಿದೇಶಾಂಗ ಇಲಾಖೆಯಲ್ಲೂ ಕೆಲಸ ಮಾಡಿದ್ದಾರೆ. ಪಕ್ಷದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಯಾಗಿ 9 ಸೇವೆ ಸಲ್ಲಿಸಿದ್ದ ಅಬೆ, 2006ರ ಜುಲೈನಲ್ಲಿ ಪ್ರಧಾನಿ ಹುದ್ದೆ ಅಲಂಕರಿಸಿದ್ದರು.
52ನೇ ವಯಸ್ಸಿನಲ್ಲಿ ಪ್ರಧಾನಿ ಹುದ್ದೆಗೇರಿದ ಅಬೆ, ಆ ಮೂಲಕ ಅತಿ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿ ದ್ದರು. ಪ್ರಧಾನ ಮಂತ್ರಿಯಾಗಿ ಎರಡು ಅವಧಿಯನ್ನೂ ಪೂರ್ಣಗೊಳಿಸಿದ ಅಬೆ, ಅನಾರೋಗ್ಯದ ಕಾರಣಕ್ಕಾಗಿ 2020ರಲ್ಲಿ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿದ್ದರು.