ಎಐಎಡಿಎಂಕೆಯ ಎಡಪ್ಪಾಡಿ ಕೆ.ಪಳನಿಸ್ವಾಮಿ ನೇತೃತ್ವದಲ್ಲಿ ಕರೆಯಲಾದ ಸಭೆಗೆ ತಡೆ ನೀಡಬೇಕೆಂದು ಕೋರಿ ಓ ಪನ್ನೀರ್ ಸೆಲ್ವಂ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈ ಕೋರ್ಟ್ ವಜಾಗೊಳಿಸಿದೆ.
ಮದ್ರಾಸ್ ಹೈಕೋರ್ಟ್ ಓ.ಪನ್ನೀರ್ ಸೆಲ್ವಂ ಅರ್ಜಿಯನ್ನು ವಜಾಗೊಳಿಸಿದ ನಂತರ ತಮಿಳ್ ಮಹಾನ್ ಹುಸೈನ್ ಅಧ್ಯಕ್ಷತೆಯಲ್ಲಿ ನಡೆದ ಎಐಎಡಿಎಂಕೆ ಸಭೆಯಲ್ಲಿ ಕೆ.ಪಳನಿಸ್ವಾಮಿಯನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿ ವಿವರಿಸಿದೆ.
ಅಲ್ಲದೇ, ಎಐಎಡಿಎಂಕೆಗೆ ಉಪಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ರಚಿಸಲಾಗಿದೆ ಎಂದು ವರದಿ ತಿಳಿಸಿದೆ.
ಚೆನ್ನೈನ ವನಗ್ರಾಮ್ ನಲ್ಲಿ ಎಐಎಡಿಎಂಕೆಯ ಸಾಮಾನ್ಯ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಓ.ಪನ್ನೀರ್ ಸೆಲ್ವಂ ಬೆಂಬಲಿಗರು ಎಡಪ್ಪಾಡಿ ಕೆ.ಪಳನಿಸ್ವಾಮಿ ಫೋಟೋಗಳಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.