‘ಟಿಡಿಪಿ ಯಾವಾಗಲೂ ಸಾಮಾಜಿಕ ನ್ಯಾಯದ ಪರ ನಿಲ್ಲುತ್ತದೆ. ಈ ಹಿಂದೆ ಕೆ.ಆರ್. ನಾರಾಯಣನ್ ಮತ್ತು ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಗೆ ಬೆಂಬಲ ನೀಡಿತ್ತು. ಅದೇ ರೀತಿ ಆದಿವಾಸಿ ಮಹಿಳೆ, ದ್ರೌಪದಿ ಮುರ್ಮು ಅವರನ್ನು ಪಕ್ಷವು ಬೆಂಬಲಿಸಲಿದೆ’ ಎಂದು ತಿಳಿಸಿದ್ದಾರೆ.
ಟಿಡಿಪಿ ರಾಜ್ಯಸಭೆಯಲ್ಲಿ ಒಂದು ಸ್ಥಾನ, ಲೋಕಸಭೆಯಲ್ಲಿ 3 ಸ್ಥಾನ ಹಾಗೂ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ 23 ಸದಸ್ಯರ ಬಲ ಹೊಂದಿದೆ.