ಲಖನೌ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ನನ್ನ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಉತ್ತರ ಪ್ರದೇಶದ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಸೀತಾಪುರ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊಹಮ್ಮದ್ ಜುಬೈರ್ನನ್ನ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಯಿತು. ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಕಳೆದ ವರ್ಷ ನವೆಂಬರ್ʼನಲ್ಲಿ ದಾಖಲಾದ ಪ್ರಕರಣದಲ್ಲಿ ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ನ್ಯಾಯಾಲಯವು ಜುಬೈರ್ʼಗೆ ಜುಲೈ 11ರಂದು ಸಮನ್ಸ್ ನೀಡಿತ್ತು.
ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ಜುಬೈರ್ ಶುಕ್ರವಾರ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದ ಸ್ವಲ್ಪ ಸಮಯದ ನಂತರ, ಲಖಿಂಪುರ್ ಖೇರಿ ಪೊಲೀಸರು ನ್ಯಾಯಾಲಯಕ್ಕೆ ಹಾಜರಾಗಲು ವಾರಂಟ್ ಹೊರಡಿಸಿದ್ದಾರೆ.
ಎಫ್ಐಆರ್ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.