ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ಗೇಟ್ ಗಳನ್ನು ತೆರೆಯುವುದರ ಮೂಲಕ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು.
ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿಯಾಗಿದೆ. ನೀರಿನ ಮಟ್ಟ 183.2 ಅಡಿ ತಲುಪಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 4 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡಲಾಯಿತು.
ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ನದಿ ತೀರದ ಪ್ರದೇಶಗಳಿಗೆ ಬಿಡದಂತೆ ಮತ್ತು ಸಾರ್ವಜನಿಕರು ತಿರುಗಾಡದಂತೆ ಮುನ್ನೆಚ್ಚ ರಿಕೆ ವಹಿಸುವಂತೆ ತಹಸೀಲ್ದಾರ್ ಆರ್ ಪ್ರದೀಪ್ ತಿಳಿಸಿದ್ದಾರೆ.
1962ರಲ್ಲಿ ನಿರ್ಮಾಣವಾದ ಈ ಜಲಾಶಯ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ ಮತ್ತು ಗದಗ ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸುತ್ತಿದೆ. ನದಿ ಭರ್ತಿಯಾದ ಹಿನ್ನಲೆ ಯಲ್ಲಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.