ನವದೆಹಲಿ: ರಾಜ್ಯಸಭಾ ನಾಯಕರನ್ನಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ಮರು ನೇಮಕ ಮಾಡಲಾಗಿದೆ. ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರು ಮಾಹಿತಿ ನೀಡಿದರು.
2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭೆಯ ನಾಯಕರನ್ನಾಗಿ ನೇಮಿಸಿ ದ್ದರು. ಬಳಿಕ ಗೋಯಲ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಇದೇ ಏಪ್ರಿಲ್ನಲ್ಲಿ ಕೊನೆಗೊಂಡಿತ್ತು. ಇದರಿಂದ ಸದನದ ನಾಯಕ ಸ್ಥಾನವೂ ಖಾಲಿಯಾಗಿತ್ತು.
ಕಳೆದ ಎರಡು ವರ್ಷಗಳಲ್ಲಿ ರಾಜ್ಯಸಭೆಯಲ್ಲಿ ಮಹತ್ವದ ಮಸೂದೆಗಳನ್ನು ಅಂಗೀಕರಿಸುವಾಗ ಕಾಂಗ್ರೆಸ್ ಜತೆ ಮೈತ್ರಿ ಮಾಡಿ ಕೊಳ್ಳದ ಬಿಜೆಡಿ, ಎಐಎಡಿ ಎಂಕೆಯಂತಹ ಪಕ್ಷಗಳ ಬೆಂಬಲ ಪಡೆದುಕೊಳ್ಳುವಲ್ಲಿ ಗೋಯಲ್ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಜು.8 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಿಯೂಷ್ ಗೋಯಲ್ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು.