ನವದೆಹಲಿ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 20,044 ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, 56 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,660 ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,40,760ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 18,301 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,30,63,651ಕ್ಕೆ ತಲುಪಿದೆ. ಒಂದೇ ದಿನದಲ್ಲಿ 1,687 ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳ ವಾಗಿದೆ.
ಭಾರತದಾದ್ಯಂತ ಹಮ್ಮಿಕೊಂಡಿರುವ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 199.71 ಕೋಟಿ ಡೋಸ್ ಲಸಿಕೆ ನೀಡಲಾ ಗಿದೆ. ಕೋವಿಡ್ ನಾಲ್ಕನೇ ಅಲೆಯ ಹಿನ್ನೆಲೆಯಲ್ಲಿ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.