ಸಂಸತ್ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದ್ದು, ಬ್ಯಾಲೆಟ್ ಬಾಕ್ಸ್ ಗಳು ಈಗಾಗಲೇ ಅಲ್ಲಿಗೆ ತಲುಪಿವೆ. ಜು.21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜು.25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಾದೇಶಿಕ ಪಕ್ಷಗಳಾದ ಬಿಜು ಜನತಾ ದಳ, ವೈಎಸ್‌ಆರ್ ಕಾಂಗ್ರೆಸ್ , ಬಹುಜನ ಸಮಾಜ ಪಕ್ಷ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ತೆಲುಗು ದೇಶಂ ಪಕ್ಷ, ಜನತಾ ದಳ-ಜಾತ್ಯತೀತ, ಶಿರೋಮಣಿ ಅಕಾಲಿದಳ, ಶಿವಸೇನೆ ಮುಂತಾದವುಗಳ ಬೆಂಬಲ ದೊಂದಿಗೆ ಮುರ್ಮು ಅವರ ಮತ ಹಂಚಿಕೆಯು ಸುಮಾರು ಮೂರನೇ ಎರಡರಷ್ಟು ತಲುಪುವ ಸಾಧ್ಯತೆಯಿದೆ ಮತ್ತು ಅವರು ಬುಡಕಟ್ಟು ಸಮುದಾಯದಿಂದ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಮಹಿಳೆಯಾಗಲಿದ್ದಾರೆ.
ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್ ಡಿಎ ಅಭ್ಯರ್ಥಿ ಈಗ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ. ಪ್ರಾತಿನಿಧ್ಯ ವ್ಯವಸ್ಥೆಯ ಮೂಲಕ ರಾಷ್ಟ್ರಪತಿ ಆಯ್ಕೆ ನಡೆಯಲಿದ್ದು, ಚುನಾಯಿತ ಸಂಸದರು ಮತ್ತು ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ.