ಆಜಾದ್ ಅವರನ್ನು ಪಕ್ಷದ ಮುಖ್ಯಮಂತ್ರಿಯಾಗಿ ಹೆಸರಿಸಬೇಕೆಂಬ ಜಮ್ಮು ಕಾಶ್ಮೀರ ನಾಯಕರ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಮೊದಲ ಅಸೆಂಬ್ಲಿ ಚುನಾವಣೆ ಈ ವರ್ಷದ ಅಂತ್ಯದ ವೇಳೆಗೆ ನಡೆಯಲಿದೆ.
ಮುಂದಿನ ಕೆಲವೇ ದಿನಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಈ ಸಂಬಂಧ ಅಧಿಕೃತ ಘೋಷಣೆ ಮಾಡಲಿದ್ದಾರೆ
ಪಕ್ಷದಲ್ಲಿ ಆಜಾದ್ ಅವರಂತ ಮತ್ತೊಬ್ಬ ನಾಯಕರಿಲ್ಲ. ಜಮ್ಮು ಕಾಶ್ಮೀರದಲ್ಲಿ ಪ್ರಭಾವಿ ನಾಯಕರಾಗಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಸ್ವೀಕಾರಾರ್ಹರಾಗಿದ್ದಾರೆ. ಆಜಾದ್ ಅವರು ಜಮ್ಮು-ಕಾಶ್ಮೀರ ಸಿಎಂ ಆಗಿದ್ದ ಅವಧಿಯಲ್ಲಿ ನೀಡಿದ್ದ ಉತ್ತಮ ಆಡಳಿತ ವನ್ನು ಜನರು ಇನ್ನೂ ನೆನಪಿಸಿಕೊಳ್ಳುತ್ತಾರೆ . ಆಜಾದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.
ಜಿಎ ಮಿರ್ ರಾಜೀನಾಮೆ ನೀಡಿದ ನಂತರ ಆ ಸ್ಥಾನ ತೆರವಾದ ಕಾರಣ ಕಾಂಗ್ರೆಸ್ ಹಿರಿಯ ನಾಯಕ ಆಜಾದ್ ಅವರನ್ನು ನೂತನ ಜೆಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ.