ಬೆಂಗಳೂರು:
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿರಾಶ್ರಿತರ ಮೇಲೆ ಹೆಚ್ಚಿನ ನಿಗಾ ವಹಿಸಿ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿಯವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.
ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಈ ಕೇಂದ್ರದಲ್ಲಿ 672 ನಿರಾಶ್ರಿತರಿದ್ದಾರೆ. ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಅವರು ಬಳಸುವಂತೆ ಮನವರಿಕೆ ಮಾಡಿಕೊಡಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮುಂಜಾಗ್ರತಾ ಕ್ರಮಕೈಗೊಂಡು ಮಾರ್ಚ್ 2 ನೇ ವಾರದಿಂದಲೇ ಈ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಲಾಕ್ ಡೌನ್ ಮಾಡಿ, ಪ್ರವೇಶವನ್ನು ನಿಷೇಧಿಸಿ, ಯಾರಿಗೂ ಹೊಸದಾಗಿ ದಾಖಲು ಮಾಡಿಕೊಂಡಿಲ್ಲ ಅಲ್ಲದೇ ಸಾರ್ವಜನಿಕರಿಗೂ ಪ್ರವೇಶ ನೀಡಿರುವುದಿಲ್ಲ ಎಂದರು.
ಮುಂಜಾಗ್ರತಾ ಕ್ರಮಕೈಗೊಂಡಿದ್ದರಿಂದ ಈ ಕೇಂದ್ರದಲ್ಲಿ ಯಾರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ. ಈ ನಿರಾಶ್ರಿತರಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವುದರೊಂದಿಗೆ ವಾರದಲ್ಲಿ 2 ದಿನ ಮೊಟ್ಟೆ, ,4 ದಿನ ಹಣ್ಣು ನೀಡಲಾಗುತ್ತಿದೆ. ಕೇಂದ್ರದ ಆವರಣದಲ್ಲಿ ಪ್ರತ್ಯೇಕ ಆಸ್ಪತ್ರೆ ಇದ್ದು, ಇಬ್ಬರು ವೈದ್ಯರು ಹಾಗೂ 8 ನರ್ಸ್ ಗಳು ಗಳಿದ್ದು, ದಿನ 24 ಗಂಟೆ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತ್ಯೇಕ ಅಂಬುಲೆನ್ಸ್ ಇದೆ . ಅಗತ್ಯ ವಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಉತ್ತಮ ಗುಣಮಟ್ಟದ ಆಸ್ಪತ್ರೆ ಗಳಿಗೆ ದಾಖಲಿಸಲಾಗುತ್ತಿದೆ.
ಮಾನಸ ಅಸ್ವಸ್ಥತರ ತಪಾಸಣೆಗಾಗಿ ತಿಂಗಳಿಗೆ 3 ಬಾರಿ ಮನೋರೋಗ ತಜ್ಞರು ಭೇಟಿ ನೀಡುತ್ತಾರೆ. ವಾರಕ್ಕೊಮ್ಮೆ ದಂತ ತಪಾಸಣೆ ಮಾಡಿಸಲಾಗುತ್ತಿದೆ. ಬೆಳಿಗ್ಗೆ ಯೋಗಾಸನ ಮಾಡಿಸಲಾಗುತ್ತಿದೆ. ಗ್ರಂಥಾಲಯ ಸೌಲಭ್ಯ ಒದಗಿಸಲಾಗಿದೆ. ವಯಸ್ಕರ ಶಿಕ್ಷಣ ಪದ್ದತಿಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತದೆ.
ಸ್ವಚ್ಚತೆಯನ್ನು ಕಾಪಾಡಿ,ಪ್ರತಿದಿನ ಕುಡಿಯಲು ಶುದ್ದೀಕರಿಸಿದ ಬಿಸಿನೀರನ್ನು ಒದಗಿಸಲಾಗುತ್ತಿದೆ. ಕೇಂದ್ರದಲ್ಲಿ ಸ್ವಚ್ವತೆ, ಕೃಷಿ, ಹೈನುಗಾರಿಕೆ, ತೋಟಗಾರಿಕೆ, ಕುರಿಸಾಗಾಣಿಕೆ, ಬಟ್ಟೆ ತೊಳೆಯುವುದನ್ನು ನಿರಾಶ್ರಿತರು ಸ್ವಯಂ ಪ್ರೇರಣೆಯಿಂದ ಕಾರ್ಯನಿರ್ಹಿಸುತ್ತಿದ್ದಾರೆ. ಕಾರ್ಯನಿರ್ವಹಿಸುವವರಿಗೆ ದಿನಕ್ಕೆ 78ರೂ. ಅವರ ಬ್ಯಾಂಕ್ ಖಾತೆಗೆ ಜನ ಜಮಾಮಾಡಲಾಗಿದೆ. ಟೈಲರಿಂಗರ್, ಫೆನಾಯಿಲ್ ಸಿದ್ದಪಡಿಸಲಾಗುತ್ತದೆ. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಅವರು ತೀಳಿಸಿದರು.
ನಂತರ ಕೇಂದ್ರವು ನಿರ್ವಹಿಸುತ್ತಿರುವ ತೋಟಗಾರಿಕೆ, ಕೃಷಿ, ಟೈಲರಿಂಗ್ , ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಿರಾಶ್ರಿತರ ಪರಿಹಾರ ಕೇಂದ್ರದ ಕಾರ್ಯದರ್ಶಿ ಶ್ರೀ ಚಂದ್ರಾ ನಾಯ್ಕ್ , ಕ್ರೈಸ್ ನ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಘವೇಂದ್ರ ಡಿಸಿಎಂ ಅವರ ಆಪ್ತಕಾರ್ಯದರ್ಶಿ ಶ್ರೀ ವಿ. ಶ್ರೀನಿವಾಸ್, ವಿಶೇಷ ಕರ್ತವ್ಯಾಧಿಕಾರಿ ಶ್ರೀ ಆರ್.ಬಿ. ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.