Monday, 28th October 2024

ಗುಣಮುಖರಾದ ರೋಗಿ ಆಸ್ಪತ್ರೆಯಿಂದ ಬಿಡುಗಡೆ

ವಿಜಯಪುರ :

ಜಿಲ್ಲೆಯಲ್ಲಿ ಕೋವಿಡ್-19 ದಿಂದ ಗುಣಮುಖರಾದ ಒಟ್ಟು 34 ರೋಗಿಗಳು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, ಸಧ್ಯಕ್ಕೆ 13 ರೋಗಿಗಳು ಮಾತ್ರ ಕೋವಿಡ್-19 ಪಾಸಿಟಿವ್ ಸಕ್ರೀಯ ರೋಗಿಗಳಾದ್ದು ಪರಿಣಾಮಕಾರಿಯಾದ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ,ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಈವರೆಗೆ 50 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. ಇಂದು ದಿನಾಂಕ 12-05-2020 ರಂದು ಕೋವಿಡ್-19 ದಿಂದ ಗುಣಮುಖರಾದ ಒರ್ವ ವ್ಯಕ್ತಿಯು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಹೊಂದಿದ್ದು, 62 ವರ್ಷ ವಯೋಮಾನದ ವೃದ್ಧ ರೋಗಿ ಸಂಖ್ಯೆ;537 ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 13 ಕೋವಿಡ್-19 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು ಪರಿಣಾಮಕಾರಿ ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2175 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 736 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 1403 ಜನರು (1 ರಿಂದ 28 ದಿನಗಳ) ರಿರ್ಪೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು ಮೂರು ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 34 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 13 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ.

ಈವರೆಗೆ 2647 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 2477 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 120 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ. ಅದರಂತೆ ಇತ್ತಿಚಿಗೆ ಜಿಲ್ಲೆಗೆ ಆಗಮಿಸಿರುವ ತಬ್ಲೀಘಿ ಜಮಾತ್‍ನ 13 ಸದಸ್ಯರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನೂ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಿಂದ ಗುಣಮುಖ ರೋಗಿ ಬಿಡುಗಡೆ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಎಸ್.ಎ ಕಟ್ಟಿ, ಡಾ.ಲಕ್ಕಣ್ಣವರ, ಡಾ.ಬಿರಾದಾರ, ಡಾ. ಇಂಗಳೆ, ಡಾ. ಝಳಕಿ, ರಮೇಶ ರಾಠೋಡ, ಜಗದೀಶ ಮಾನಕರ, ಅಜೀತ ಕೊಟ್ನಿಸ, ಸುವರ್ಣ ಮಾನಕರ, ನಾಗೇಶ ಹಳ್ಳಿ, ಮಂಜುನಾಥ ಹೊಸಮನಿ, ಸುರೇಶ ಕಟ್ಟಿಮನಿ, ಪರಶುರಾಮ ಮಸಳಿ, ಶಾಂತಾ ಆರ್ ಹಾಗೂ ಜಿಲ್ಲಾಸ್ಪತ್ರೆ ಸಿಬ್ಬಂದಿ ಇದ್ದರು.