ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ, ದೆಹಲಿಗೆ ವರ್ಗಾಯಿಸುವಂತೆ ಆದೇಶಿಸಿರುವ ನ್ಯಾಯಾಲಯವು, ಈ ಕುರಿತಂತೆ ಏಕೀಕೃತ ತನಿಖೆ ನಡೆಯಬೇಕೆಂದು ಹೇಳಿದೆ.
‘ಒಂದು ಪ್ರಕರಣದಲ್ಲಿ ಜಾಮೀನು ಪಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜುಬೈರ್ ಅವರನ್ನು ಬಂಧಿಸಲಾಗುತ್ತಿದೆ. ಎಲ್ಲ ಎಫ್‌ಐಆರ್‌ಗಳು ಒಂದೇ ಗುರಿಯನ್ನು ಹೊಂದಿರುವಂತೆ ತೋರುತ್ತದೆ ಎಂದು ಕಳೆದ ಬಾರಿಯ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಅಭಿಪ್ರಾಯಪಟ್ಟಿತ್ತು.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿ ದ್ದರು.