ಜು.6ರಂದು ಯುಎಇಯಿಂದ ರಾಜ್ಯಕ್ಕೆ ಆಗಮಿಸಿದ ಮಲಪ್ಪುರಂ ಮೂಲದ ವ್ಯಕ್ತಿಗೆ ಮಂಕಿ ಪಾಕ್ಸ್ ಪಾಸಿಟಿವ್ ದೃಢಪಟ್ಟಿದ್ದು, ಅವರು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಲ್ಲರನ್ನೂ ಸೂಕ್ಷ್ಮ ವಾಗಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.