ದೆಹಲಿ:
ದೇಶವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕರೋನಾ ನಿಯಂತ್ರಿಸಲು ಕೇಂದ್ರ ಸರಕಾರ 14 ರಾಜ್ಯಗಳಿಗೆ 6,195.08 ಕೋಟಿ ಬಿಡುಗಡೆ ಮಾಡಿದೆ. ದುರಂತವೆಂದರೆ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ
ಬಿ.ಎಸ್.ಯಡಿಯೂರಪ್ಪ ಮಾಡಿಕೊಂಡ ಮನವಿಗೆ ಮನ್ನಣೆ ಸಿಕ್ಕಿಲ್ಲ.
ಕೇಂದ್ರ ಸರಕಾರ 14 ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಕರ್ನಾಟಕಕ್ಕೆ ಬಿಡುಗಾಸು ಸಿಕ್ಕಿಲ್ಲ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 6195.08 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿದ್ದಾರೆ.
ಈ ಅನುದಾನವನ್ನು ಕರೋನಾ ನಿಯಂತ್ರಿಸಲು ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸಿಕ್ಕಿಿಂ, ತಮಿಳುನಾಡು, ತ್ರಿಪುರ,
ಉತ್ತರಖಂಡ್, ಪಶ್ಚಿಮ ಬಂಗಾಳ, ಅಸ್ಸಾಾಂ, ಹಿಮಾಚಲಪ್ರದೇಶ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಲ್ಯಾಾಂಡ್ ಮತ್ತು ಪಂಜಾಬ್ ರಾಜ್ಯಗಳಿಗೆ ಬಿಡುಗಡೆಯಾಗಿದೆ.
ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಸಂವಾದ ನಡೆಸಿದ್ದ ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಆರ್ಥಿಕ
ಪರಿಸ್ಥಿತಿ ತುಂಬ ಹದಗೆಟ್ಟಿದ್ದು, ಕೇಂದ್ರದಿಂದ ವಿಶೇಷ ಹಣಕಾಸಿನ ನೆರವು ನೀಡಬೇಕೆಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕೇಳಬೇಕೆಂದು ಆಗ್ರಹ ಮಾಡಿದ್ದರು.