Friday, 18th October 2024

ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ.

ಬೆಳ್ಳಾರೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಜನ ಸಂಚಾರ ಅತೀ ವಿರಳವಾಗಿದೆ. ಪ್ರತಿ ಅಂಗಡಿಗಳ ಬಾಗಿಲಿಗೂ ಬೀಗ ಹಾಕಲಾಗಿದೆ. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನುವ ವಾತಾವರಣ ಕಾಣಿಸುತ್ತಿದೆ.

 

ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಿಂತಿದ್ದ ವೇಳೆಯಲ್ಲಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಹತ್ಯೆ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ.

ಹತ್ಯೆ ನಂತರ ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ನಡೆದ ಅಹಿತಕರ ಘಟನೆ ಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಸೆಕ್ಷನ್‌ 144 ಜಾರಿ ಮಾಡಿ ಪುತ್ತೂರು ವಿಭಾಗಾಧಿಕಾರಿ ಗಿರೀಶ್‌ ನಂದನ್‌ ಆದೇಶ ಹೊರಡಿಸಿದ್ದಾರೆ.

ಗುರುವಾರ ಪುತ್ತೂರಿನ ಎರಡು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಡಬ, ಬೆಳ್ಳಾರೆ ಪೇಟೆಗಳು ಸಂಪೂರ್ಣ ಬಂದ್ ಮಾಡಲಾಗಿದ್ದು, ಕಡಬದಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರವೀಣ್‌ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸ ಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಮತ್ತು ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಆಗಿರುವದರ ನೆನಪಿಗೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ‘ಜನೋತ್ಸವ’ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.