ನವದೆಹಲಿ: ಭಾರತದಲ್ಲಿ 24ಗಂಟೆಯಲ್ಲಿ 20,409 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ದೇಶಾ ದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,39,79,730ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,43,988ಕ್ಕೆ ತಲುಪಿದೆ. 24 ಗಂಟೆ ಯಲ್ಲಿ ಕೋವಿಡ್ ನಿಂದ 32 ಜನರು ಮೃತಪಟ್ಟಿದ್ದು, ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,258ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 2,335 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. 24ಗಂಟೆಯಲ್ಲಿ 22,697 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.47ರಷ್ಟಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.5.12ಕ್ಕೆ ಏರಿಕೆಯಾಗಿದೆ.