ಶುಕ್ರವಾರ ಪೊಲೀಸರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಮಹತ್ವದ ಚರ್ಚೆ ನಡೆಸಿದ ಬಳಿ,ನಿರ್ಧಾರಕ್ಕೆ ಬರಲಾಗಿದೆ.
ಪ್ರಕರಣದಲ್ಲಿ ಅಂತರರಾಜ್ಯದ ನಂಟು ಹೊಂದಿರುವ ಕಾರಣದಿಂದಾಗಿ, ಎನ್‌ಐಎ ತನಿಖೆಗೆ ವಹಿಸುವುದಕ್ಕೆ ಸಿಎಂ ನಿರ್ಧರಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ವನ್ನು ಎನ್‌ಐಎ ತನಿಖೆಗೆ ವಹಿಸಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ತನಿಖೆಗೆ ವಹಿಸುವಂತೆ ಸಿಎಂ ಬೊಮ್ಮಾಯಿಗೆ ಪತ್ರದಲ್ಲಿ ಮನವಿ ಮಾಡಿದ್ದರು.