ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯು ತ್ತಿರುವ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಪ್ರದೇಶದಲ್ಲಿ ಎನ್ಕೌಂಟರ್ ಮುಂದುವರಿದಿದೆ. ವಾಣಿಗಂ ಬಾಲಾ ಪ್ರದೇಶದಲ್ಲಿ ಭಯೋ ತ್ಪಾದಕರು ಇರುವುದರ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾ ಚರಣೆಯನ್ನು ನಡೆಸಿದ್ದವು.