ಇಂಡಿ : ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುಶ್ಚಟಗಳು, ದುವ್ರ÷್ಯಸನಿಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭೀಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯವಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು.
ಅವರು ಸೋಮವಾರ ತಾಲೂಕ ಆಡಳಿತದಿಂದ ಹಮ್ಮಿಕೊಂಡ ಪೂಜ್ಯ ಶ್ರೀ ಮ.ನಿ.ಪ್ರ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದಿನ ಅಧುನಿಕ ಯುಗವು ಸಂಪೂರ್ಣ ಯುವಕರ ಮೇಲೆ ನಿಂತಿದೆ. ಅವರೇ ವ್ಯಸನಿ ಗಳಾದರೆ ದೇಶದ ಅಥ್ಯವ್ಯವಸ್ಥೆಗೆ ತೊಂದರೆ ಯಾಗಲಿದೆ. ಮಾದಕ ವಸ್ತುಗಳ ಮೇಲೆ ಹಾನಿಕಾರಕ ಎಂಬ ಮಾಹಿತಿ ಇದ್ದರು ಸಹಿತ ಅದರಿಂದ ಯುವಜನತೆ ದೂರವಾಗ ದಿರುವುದು ವಿಷಾದನೀಯ ಸಂಗತಿ.ಇದರಿAದ ದೇಶದಲ್ಲಿ ಅನೇಕ ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಹೇಳಿದ ಅವರು, ಸ್ವಚ್ಚಂದ ಸಮಾಜ ನಿರ್ಮಾಣಕ್ಕೆ ಯುವಕರು ಸನ್ನದ್ದರಾಗಬೇಕು ಎಂದು ಹೇಳಿದರು.
ಯುವ ಪೀಳಿಗೆಯ ದುಶ್ಚಟಗಳನ್ನು ಬಿಡಿಸಿ ಸದೃಡ ಸಮಾಜ ನಿರ್ಮಾಣಕ್ಕೆ ನಿರಂತರ ಹೋರಾಟ ಮಾಡಿದ ಇಲಕಲ್ಲದ ಡಾ. ಮಹಾಂತ ಶಿವಯೋಗಿಗಳ ಜಯಂತಿ ನಿಮಿತ್ಯ ಅ.೧ ರಂದು ರಾಜ್ಯಾಧ್ಯಂತ ವ್ಯವಸನ ಮುಕ್ತ ದಿನಾಚರಣೆ ಆಚರಿಸಲಾಗುತ್ತಿದೆ. ಡಾ.ಮಹಾಂತ ಶಿವಯೊಗಿಗಳು ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವುದರ ಜೊತೆಗೆ ಜನ ಸಾಮಾನ್ಯರ ದುಶ್ಚಟ ಗಳನ್ನು ದೂರಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದು,ಇದರಿಂದ ಅನೇಕರು ತಮ್ಮ ದುಶ್ಚಟಗಳನ್ನು ಬಿಟ್ಟು ಉತ್ತಮ ಬದುಕನ್ನು ಸಾಗಿಸುತ್ತಿದ್ದಾರೆ ಎಂದು ಹೇಳಿದರು. ಸಾರ್ವಜನಿಕರು,ಯುವಕರು ದುಶ್ಚಟಗಳನ್ನು ಬಿಟ್ಟು ಸುಂದರ ಸಮಾಜ ನಿರ್ಮಾಣಕ್ಕೆ ಕೈಜೊಡಿಸಬೇಕು ಎಂದು ಹೇಳಿದರು.
ಎಸಿ ರಾಮಚಂದ್ರ ಗಡಾದೆ,ಡಿ.ಎ.ಮುಜಗೊಂಡ, ಗಣಪತಿ ಬಾಣಿಕೋಲ, ಎ.ಎಸ್.ಲಾಳಸೇರಿ,ಬಸವರಾಜ ರಾವೂರ,ಸುನೀಲ ಪವಾರ,ವಿಜಯಕುಮಾರ ರಾಠೋಡ,ಪ್ರಕಾಶ ಚವಡಿಹಾಳ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು. ವ್ಯಸನ ಮುಕ್ತ ಸಮಾಜ ಅರಿವು ಜಾಥಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಜಾಗ್ರತಿ ಮೂಡಿಸಲಾಯಿತು.