”ದಾಖಲೆಗಳನ್ನು ಪರಿಶೀಲಿಸಿದಾಗ ಸ್ಮತಿ ಇರಾನಿ ಅಥವಾ ಅವರು ಪುತ್ರಿಗೆ ಯಾವುದೇ ಪರವಾನಿಗೆ ನೀಡಿಲ್ಲ ಎಂಬುದು ಸ್ಪಷ್ಟ ವಾಗಿ ಕಂಡು ಬಂದಿದೆ. ಸ್ಮೃತಿ ಇರಾನಿ ಅಥವಾ ಅವರ ಪುತ್ರಿ ರೆಸ್ಟೋರೆಂಟ್‌ನ ಮಾಲಕರು ಅಲ್ಲ. ಅಲ್ಲದೆ, ಸ್ಮೃತಿ ಇರಾನಿ ಅಥವಾ ಅವರ ಪುತ್ರಿ ಪರವಾನಿಗೆಗೆ ಅರ್ಜಿ ಸಲ್ಲಿಸಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಸ್ಮೃತಿ ಇರಾನಿ ಅವರು ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ಸಲ್ಲಿಸಿದ 2 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿ ನ್ಯಾಯಾ ಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಕಾನೂನು ಬಾಹಿರವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಸ್ಮೃತಿ ಇರಾನಿ ಹಾಗೂ ಅವರ ಪುತ್ರಿ ವಿರುದ್ಧ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿ’ಸೋಜಾ ಹಾಗೂ ಇತರರು ಸುಳ್ಳು ಆರೋಪ ಹಾಗೂ ವೈಯುಕ್ತಿಕ ದಾಳಿ ನಡೆಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.