Thursday, 24th October 2024

ನ್ಯಾಷನಲ್ ಹೆರಾಲ್ಡ್ ಪತ್ರಿಕೆ: 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ ಕೆಲವೇ ದಿನಗಳ ನಂತರ ತನಿಖಾ ಸಂಸ್ಥೆ ಮಂಗಳವಾರ ಪತ್ರಿಕೆಯ ಕಚೇರಿಗಳು ಸೇರಿದಂತೆ ಸುಮಾರು 10 ಸ್ಥಳ ಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾರಂಭಿಸಿದೆ.

ಸೋನಿಯಾ ಗಾಂಧಿ ಅವರಿಗೆ ಕಳೆದ ತಿಂಗಳು ಮೂರು ದಿನಗಳಲ್ಲಿ 12 ಗಂಟೆಗಳ ಕಾಲ 100 ಪ್ರಶ್ನೆಗಳನ್ನು ಕೇಳಲಾಗಿತ್ತು. ಸೋನಿ ಯಾರ ಪುತ್ರ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಈ ಹಿಂದೆ ಐದು ದಿನಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಸುಮಾರು 150 ಪ್ರಶ್ನೆಗಳನ್ನು ಕೇಳಲಾಗಿತ್ತು.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಡೆಸುತ್ತಿರುವ ಅಸೋಸಿ ಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿರುವುದನ್ನು ಒಳಗೊಂಡ “ನ್ಯಾಷನಲ್ ಹೆರಾಲ್ಡ್ ಕೇಸ್” ಎಂದು ಕರೆಯಲ್ಪಡುವ ಪ್ರಕರಣದಲ್ಲಿ ರಾಹುಲ್ ಹಾಗೂ ಸೋನಿಯಾ ಗಾಂಧಿಯ ವರನ್ನು ವಿಚಾರಣೆ ನಡೆಸಲಾಗುತ್ತಿದೆ.