ಸಂಪರ್ಕ ಕಡಿದುಕೊಂಡಾಗ ಹೆಲಿಕಾಪ್ಟರ್ ಬಲೂಚಿಸ್ತಾನದ ಲಸ್‌ಬೆಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ.
ನಾಪತ್ತೆಯಾಗಿರುವ ಹೆಲಿಕಾಪ್ಟರ್‌ಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪ್ರವಾಹ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಲು ತೆರಳಿದ್ದ ಆರು ಮಂದಿ ಅಧಿಕಾರಿಗಳು ಅದರಲ್ಲಿದ್ದರು ಎಂದು ಪಾಕಿಸ್ತಾನ ಸೇನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಪ್ರಧಾನ ನಿರ್ದೇಶಕ ಮೇಜರ್ ಜನರಲ್ ಬಾಬರ್ ಇಫ್ತಿಕಾರ್ ಹೇಳಿದ್ದಾರೆ.