Friday, 20th September 2024

ಕೇರಳದಲ್ಲಿ ಮಳೆಯ ಆರ್ಭಟ: ಮೃತರ ಸಂಖ್ಯೆ 13ಕ್ಕೆ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 13ಕ್ಕೆ ತಲುಪಿದೆ.

ಕೇರಳದ ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ದಿನಕ್ಕೆ ರೆಡ್ ಅಲರ್ಟ್ ಮತ್ತು ತಿರುವನಂತಪುರಂ, ಕೊಲ್ಲಂ ಮತ್ತು ಕಾಸರಗೋಡು ಹೊರತುಪಡಿಸಿ ಉಳಿದ 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಪಾಲಕ್ಕಾಡ್ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 150 ಎಕರೆ ಕೃಷಿ ಭೂಮಿ ಸಂಪೂರ್ಣ ನಾಶವಾಗಿದೆ. ಮುನ್ನೆಚ್ಚರಿಕೆಯಾಗಿ, ರಾಜ್ಯ ಸರ್ಕಾರವು 14 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಬುಧವಾರ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್​ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಇಡುಕ್ಕಿಯ ಗುಡ್ಡಗಾಡು ಜಿಲ್ಲೆಗೆ ಹೊಂದಿಕೊಂಡಿರುವ ಎರ್ನಾಕುಲಂನ ನೆರಿಯಮಂಗಲಂ ಪ್ರದೇಶದಲ್ಲಿ ಗರಿಷ್ಠ 173 ಸೆಂ.ಮೀ ಮಳೆಯಾಗಿದೆ. ಬುಧವಾರ ಮತ್ತು ಗುರುವಾರ ಮಳೆಯ ಮುನ್ಸೂಚನೆ ನೀಡಿದ್ದು, ಮುಂದಿನ ಸೂಚನೆ ಬರುವವರೆಗೂ ಮೀನುಗಾರರಿಗೆ ಮನೆಯೊಳಗೆ ಇರುವಂತೆ ಸೂಚಿಸಲಾಗಿದೆ.

ಮಳೆ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ.