Friday, 22nd November 2024

ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿಯವರಿಗೆ ಪ್ರಮಾಣವಚನ ಬೋಧಿಸಿದರು.

ನಿರ್ಗಮಿತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಪರಾಷ್ಟ್ರಪತಿಯವರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 725 ಮತಗಳು ಚಲಾವಣೆಯಾಗಿದ್ದವು.ಅ ದರಲ್ಲಿ ಜಗದೀಪ್ ಧನ್ಕರ್ 528 ಮತಗಳನ್ನು ಗಳಿಸಿದ್ದರು.
ಇವರ ಪ್ರತಿಸ್ರ್ಪಧಿ ಕಾಂಗ್ರೆಸ್‍ನ ಮಾರ್ಗರೇಟ್ ಆಳ್ವ 182 ಮತ ಗಳಿಸಿ ಹಿನ್ನಡೆ ಅನುಭವಿಸಿದ್ದರು. 15 ಮತಗಳು ಅನರ್ಹ ಗೊಂಡಿದ್ದವು.

ನಾಯ್ಡು ಅವರ ಅಧಿಕಾರಾವ ಮುಕ್ತಾಯವಾಗಿದ್ದು, ಇಂದಿನಿಂದ ಜಗದೀಪ್ ಧನ್ಕರ್ ದೇಶದ ಉಪರಾಷ್ಟ್ರಪತಿಯಾಗಿ ಕೆಲಸ ನಿರ್ವಹಿಸಲಿದ್ದಾರೆ.