ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಂತರ ಇಂದು ನ್ಯಾ. ಬಿ ವೀರಪ್ಪ ಹಾಗೂ ನ್ಯಾ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.
ಈ ಆದೇಶದಿಂದ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ.
ಹೈಕೋರ್ಟ್ ಎಸಿಬಿ ರದ್ದುಗೊಳಿಸಿರುವ ವಿಚಾರದ ಕುರಿತ ಆದೇಶವನ್ನು ನೋಡಿದ ನಂತರ ಪೂರ್ಣ ಪ್ರಮಾಣದಲ್ಲಿ ಪ್ರತಿ ಕ್ರಿಯಿಸುತ್ತೇವೆ ಎಂದು ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆ ಆಗಿತ್ತು. ಕರ್ನಾಟದಲ್ಲಿ ಅಷ್ಟೇ ಅಲ್ಲ ಅನೇಕ ರಾಜ್ಯಗಳಲ್ಲಿ ಎಸಿಬಿ ಇದೆ. ಎಸಿಬಿ ಲೋಕಾಯುಕ್ತದಲ್ಲಿ ಇರಬೇಕು. ಸ್ವತಂತ್ರ ಅಸ್ತಿತ್ವ ಬೇಡ ಎಂದು ಈಗ ಹೈಕೋರ್ಟ್ ತೀರ್ಮಾನಿಸಿದೆ ಎಂದರು.