Sunday, 24th November 2024

ರಾಷ್ಟ್ರಧ್ವಜ ಹಾರಿಸುವ ಮೂಲಕ ಅದ್ಭುತ ಗಳಿಗೆಯನ್ನ ಸದುಪಯೋಗಪಡಿಸಿಕೊಳ್ಳಿ

ವಿಜಯಪುರ : ಇಡೀ ದೇಶ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಣೆ ಮಾಡುತ್ತಿದೆ. ಮನೆ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಅದ್ಭುತ ಗಳಿಗೆಯನ್ನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಲವರ ತ್ಯಾಗ, ಬಲಿದಾನದಿಂದ, ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಸುವರ್ಣಮಹೋತ್ಸವಕ್ಕೆ ಹಾಗೂ ಅಮೃತ ಮಹೋತ್ಸವಕ್ಕೆ ಸಾಕ್ಷಿಯಾಗಿರುವ ನಾವೇ ಪುಣ್ಯವಂತರು. ಈ ಸಂದರ್ಭವನ್ನು ಸಂಭ್ರಮ ದಿಂದ ಆಚರಣೆ ಮಾಡಬೇಕು, ಎಲ್ಲರೂ ತಮ್ಮ ತಮ್ಮ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸ ಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ವತಿಯಿಂದಲೂ ತಾಲೂಕು, ಪ್ರತಿ ಗ್ರಾಮಗಳಲ್ಲೂ ಸ್ವಾತಂತ್ರ್ಯ ಮಹೋತ್ಸವ ಅದ್ದೂರಿಯಾಗಿ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಬೈಕ್ ರ್ಯಾಲಿ, ಪಥ ಸಂಚಲನ, ರಾಷ್ಟ್ರಧ್ವಜವನ್ನು ಪ್ರತಿ ಮನೆಗೆ ಉಚಿತವಾಗಿ ನೀಡುವುದು, ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಕಾರ್ಯ ಕ್ರಮದಲ್ಲಿ ಎಲ್ಲ ಶಾಸಕರು, ಪಕ್ಷದ ಮುಖಂಡರು ಕಡ್ಡಾಯವಾಗಿ ಭಾಗಾವಹಿಸಿಬೇಕು ಎಂದು ಹೇಳಿದರು.

ಈ ವೇಳೆ ಮಾತನಾಡಿದ ಸಂಸದ ರಮೇಶ್ ಜಿಗಜಿಣಗಿ, ಮೋದಿ ಅವರ ಬಲಿಷ್ಠ ಆಡಳಿತದಲ್ಲಿ ರಾಷ್ಟ್ರವು ಅತ್ಯಂತ ಪ್ರಭಾವಶಾಲಿ ಯಾಗಿದೆ. ಯುವಕರಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೂಡುತ್ತಿದೆ. ಅದರಂತೆ ಮನೆಮನೆಯಲ್ಲಿ ರಾಷ್ಟ್ರಧ್ವಜ ಹಾರಿಸೋಣ ಎಂದು ಹೇಳಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ, ಸಂಸದ ರಮೇಶ್ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ್, ಸುರೇಶ್ ಬಿರಾದಾರ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

***

ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದ ಜಿಲ್ಲಾಧ್ಯಕ್ಷ ಕೂಚಬಾಳ ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಆ ರೀತಿ ಮಾತನಾಡಬಾರದು, ಇವರ ಹೇಳಿಕೆ ವಿರುದ್ಧ ಸಾರ್ವಜನಿಕವಾಗಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

***

ಪ್ರಿಯಾಂಕ ಖರ್ಗೆ ಅವರ ಹೇಳಿಕೆ ದುರದೃಷ್ಟಕರ ನನಗೂ ಅವರಿಗಿಂತ ಕೆಟ್ಟದಾಗಿ ಮಾತನಾಡಲು ಬರುತ್ತದೆ. ಅವರ ತಂದೆ ಕಾಲದಲ್ಲಿ ಏನು ನಡೆಯಿತು ಎಂಬುದು ಎಲ್ಲರಿಗೂ ಗೊತ್ತು. ಅಸಭ್ಯವಾಗಿ ಮಾತನಾಡಿ ಸಣ್ಣವರಾಗಬಾರದು. ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.