ಖುಷಿನಗರ: ಉತ್ತರ ಪ್ರದೇಶದ ಖುಷಿ ನಗರದಲ್ಲಿ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಲ್ಮಾನ್ (21) ಎಂದು ಗುರುತಿಸ ಲಾಗಿದೆ. ಧ್ವಜ ತಯಾರು ಮಾಡಿದ ಆತನ ಚಿಕ್ಕಮ್ಮ ಶಹನಾಜ್ (22) ವಿರುದ್ಧವೂ ಪ್ರಕರಣ ದಾಖಲಾಗಿದೆ. ಧ್ವಜ ಹಾರಿಸಲು ಸಹಕರಿಸಿದ ಸಲ್ಮಾನ್ ಸೋದರ ಇಮ್ರಾನ್ ವಿರುದ್ಧ ಬಾಲಾಪ ರಾಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ದೇಶಾದ್ಯಂತ ಜನರು ತಮ್ಮ ಮನೆಗಳಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ ಇಂದಿನಿಂದ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಇದೇ ವೇಳೆ ಆರೋಪಿ ಸಲ್ಮಾನ್ ಪಾಕಿಸ್ತಾನದ ಧ್ವಜವನ್ನು ತನ್ನ ಮನೆಯ ಮೇಲೆ ಹಾರಿಸಿದ್ದ. ಜಿಲ್ಲೆಯ ತರಿಯಾ ಸುಜನ್ ಪೊಲೀಸ್ ಠಾಣೆ ವ್ಯಾಪ್ತಿಯ ವೇದುಪಾರ್ ಮುಸ್ತಾಕ್ವಿಲ್ ಗ್ರಾಮದ ನಿವಾಸದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿದ್ದಾನೆ.