ಗುವಾಹಟಿಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶರ್ಮಾ ಅವರು, ಸುಮಾರು 4 ಲಕ್ಷ ಪ್ರಕರಣಗಳು ವಿಚಾರಣೆಗೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ 2021ರ ಆಗಸ್ಟ್ 14ರ ಮಧ್ಯರಾತ್ರಿಯ ಮೊದಲು ದಾಖಲಾದ ಸಣ್ಣ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅತ್ಯಾಚಾರ, ಕೊಲೆ ಸೇರಿದಂತೆ ಬಾಕಿ ಉಳಿದಿರುವ ಗಂಭೀರ ಅಪರಾಧ ಪ್ರಕರಣಗಳ ವಿಚಾರಣೆ ನಡೆಸಲು ನ್ಯಾಯಾಲಯಗಳಿಗೆ ಸಹಾಯಕವಾಗಲಿದೆ ಎಂದು ಶರ್ಮಾ ಹೇಳಿದರು.
ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಮಹತ್ವ ಸಾರುವ ನೆಲೆಯಲ್ಲಿ ಸುಮಾರು ಒಂದು ಸಾವಿರ ಯುವಕರು ಅಂಡಮಾನ್ ನಲ್ಲಿರುವ ಸೆಲ್ಯೂಲರ್ ಜೈಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು.
ಈ ವರ್ಷ ಶೈಕ್ಷಣಿಕ ಪ್ರವಾಸದಲ್ಲಿ ರಾಜ್ಯ ಸರ್ಕಾರ ಒಂದು ಸಾವಿರ ಯುವಕರನ್ನು ಅಂಡಮಾನ್ ಜೈಲು ವೀಕ್ಷಣೆ ಮಾಡುವ ಅವಕಾಶ ಕಲ್ಪಿಸಿ ಕೊಟ್ಟಿರುವುದಾಗಿ ಹೇಳಿದರು.