ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್ಲೋಡ್ ಮಾಡಿದ್ದಾರೆ. ಸರ್ಕಾರದ ಮನವಿಗೆ ಸ್ಪಂದಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ.
ಜು.22ರಂದು ಪ್ರಧಾನಿ ನರೇಂದ್ರ ಮೋದಿಯವರು ಮನೆಗಳಲ್ಲಿ ಅಥವಾ ಕೆಲಸ ಮಾಡುವ ಸ್ಥಳಗಳಲ್ಲಿ ರಾಷ್ಟ್ರಧ್ವಜ ಹಾರಿಸು ವಂತೆ ಮನವಿ ಮಾಡಿದ್ದರು. 75ನೇ ವರ್ಷಾಚರಣೆಯ ಕಾರ್ಯಕ್ರಮಗಳು 2023 ಆ.15ರ ವರೆಗೆ ಮುಂದುವರಿಯಲಿವೆ.