Friday, 20th September 2024

ಫಿಫಾ ಕಾನೂನುಗಳ ಉಲ್ಲಂಘನೆ: ಎಐಎಫ್‌ಎಫ್ ಅಮಾನತು

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ನಿರ್ಧರಿಸಿ ರುವುದಾಗಿ ಫಿಫಾ ಮಂಗಳವಾರ ಪ್ರಕಟಿಸಿದೆ. ಫಿಫಾ ಕೌನ್ಸಿಲ್‌ನ ಬ್ಯೂರೋ ಈ ನಿರ್ಧಾರವನ್ನು ಸರ್ವಾನುಮತ ದಿಂದ ತೆಗೆದು ಕೊಂಡಿದೆ.

ಭಾರತ ಫುಟ್‌ಬಾಲ್ ಫೆಡರೇಶನ್ ನಲ್ಲಿ ಮೂರನೇ ವ್ಯಕ್ತಿಗಳ ʼಅನಗತ್ಯ ಪ್ರಭಾವ ಹೆಚ್ಚಾಗಿದೆ. ಇದು ಇದು ಫಿಫಾ ಕಾನೂನುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಫಿಫಾ ಸಂಸ್ಥೆಯ ಅಧಿಕೃತ ಮಾಧ್ಯಮ ಪ್ರಕಟಣೆ ತಿಳಿಸಿದೆ. ಮೂರನೇ ವ್ಯಕ್ತಿಗಳ ಅನಗತ್ಯ ಪ್ರಭಾವದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ಇದು ಫಿಫಾ ಕಾನೂನುಗಳ ಗಂಭೀರ ಉಲ್ಲಂಘನೆಯಾಗಿದೆ.

ಫಿಫಾ ಕೌನ್ಸಿಲ್‌ನ ಬ್ಯೂರೋ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಸರ್ವಾನುಮತದಿಂದ ನಿರ್ಧರಿಸಿದೆ.

ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿರುವುದರಿಂದ ಈ ವರ್ಷದ ಅಕ್ಟೋಬರ್ 11ರಿಂದ 30ರ ವರೆಗೆ ಭಾರತದಲ್ಲಿ ನಡೆಯ ಲಿರುವ ಫಿಫಾ ಅಂಡರ್-17 ಮಹಿಳಾ ವಿಶ್ವಕಪ್ ಅನ್ನುಭಾರತದಲ್ಲಿ ಯೋಜಿಸಿದಂತೆ ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ.

ಫಿಫಾ ಭಾರತದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದು ಫಿಫಾ ಹೇಳಿದೆ.