ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,11,252ಕ್ಕೆ ಇಳಿಕೆಯಾಗಿದೆ. 24 ಗಂಟೆಯಲ್ಲಿ ಕೋವಿಡ್ ನಿಂದ 29 ಮಂದಿ ಮೃತಪಟ್ಟಿದ್ದರು. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,27,098ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 6,256 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ 98.56ರಷ್ಟಿದೆ.
ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 208.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.