ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 9,062 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶಾದ್ಯಂತ ಪ್ರಕರಣಗಳ ಒಟ್ಟು ಸಂಖ್ಯೆ 4,42,86,256 ಕೋಟಿಗೆ ಏರಿಕೆಯಾಗಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,05,058ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ 36 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಭಾರತದಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,27,134ಕ್ಕೆ ತಲುಪಿದೆ.
ಒಂದೇ ದಿನದಲ್ಲಿ 6,194 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ ಕೋವಿಡ್ 19 ಲಸಿಕೆ ಅಭಿಯಾನ ದಲ್ಲಿ ಈವರೆಗೆ 208.57 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.