ಲಖನೌ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶ ಶಾಂತನು ತ್ಯಾಗಿ ಅವರು ಈ ಪ್ರಕರಣದ ವಿಚಾರಣೆಯನ್ನು ಮುಂದಿನ ಸೆಪ್ಟೆಂಬರ್ 30ಕ್ಕೆ ನಿಗದಿಪಡಿಸಿದ್ದಾರೆ. ಈ ಹಿಂದೆ ಸಪ್ನಾ ಚೌಧರಿ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಅವರು ನ್ಯಾಯಾಲ ಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.
ಅಕ್ಟೋಬರ್ 14, 2018 ರಂದು ಆಶಿಯಾನಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಚೌಧರಿ ಜೊತೆಗೆ, ಕಾರ್ಯಕ್ರಮ ಸಂಘಟಕರಾದ ಜುನೈದ್ ಅಹ್ಮದ್, ನವೀನ್ ಶರ್ಮಾ ಸೇರಿದಂತೆ ಹಲವರ ಹೆಸರುಗಳು ಎಫ್ಐಆರ್ನಲ್ಲಿ ದಾಖಲಾಗಿವೆ.
ಅಕ್ಟೋಬರ್ 13, 2018 ರಂದು ಲಖನೌದ ಸ್ಮೃತಿ ಉಪವನದಲ್ಲಿ ನೃತ್ಯ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮ ವೀಕ್ಷಣೆ ಮಾಡಲು ನೂರಾರು ಜನರು ಟಿಕೇಟ್ ಖರೀದಿಸಿದ್ದರು. ಆದರೆ ಸಪ್ನಾ ಮತ್ತು ಅವರ ತಂಡ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.